ನವದೆಹಲಿ: 20 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವು ಉತ್ತರ ಪ್ರದೇಶವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಇಂದು ದೆಹಲಿಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.
ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ನಿವಾಸಿ ಯುವತಿ ಕಾಮುಕ ಅಟ್ಟಹಾಸದಿಂದ ಪ್ರಾಣ ಕಳೆದುಕೊಂಡಿದ್ದಾಳೆ. ಆದರೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಬಳಿಕ ಸಾರ್ವಜನಿಕರ ಆಕ್ರೋಶದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದಾರೆ ಎಂದು ಮೃತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ. ಬಳಿಕ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದಾರೆ.
ಆಗಿದ್ದೇನು?: ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಹಳ್ಳಿಯಲ್ಲಿ ಸೆಪ್ಟೆಂಬರ್ 14ರಂದು ಯುವತಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದಳು. ಈ ವೇಳೆ ನಾಲ್ವರು ಕಾಮುಕರು ಆಕೆಯ ಹಲ್ಲೆ ಮಾಡಿ ಬಜ್ರಾ ಮೈದಾನದೊಳಗೆ ಹೊತ್ತೊಯ್ದು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ದುಷ್ಕರ್ಮಿಗಳು ಆಕೆಯ ನಾಲಿಗೆಯನ್ನು ಕತ್ತರಿಸಿದ್ದರು.
PublicNext
29/09/2020 03:46 pm