ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಕೊಟ್ಟು ಹಲ್ಲೆಗೈದ ಸೆಕ್ಯೂರಿಟಿ ಗಾರ್ಡ್

ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ನವದೆಹಲಿಯಲ್ಲಿ ನಡೆದಿದೆ. ಆಗಸ್ಟ್ 13ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್‌ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ದೆಹಲಿ ಪೊಲೀಸರು ಭದ್ರತಾ ಸಿಬ್ಬಂದಿಯ ವಿರುದ್ಧ ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ. ಹುಡುಗಿಯರ ಮೇಲೆ ಹಲ್ಲೆ ನಡೆಸಿದ ಸೆಕ್ಯುರಿಟಿ ಗಾರ್ಡ್‌ನ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಮಂಗಳವಾರ ದೆಹಲಿ ಪೊಲೀಸರಿಗೆ ಪತ್ರ ಬರೆದು ಈ ವಿಷಯದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರಿದ್ದಾರೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಡಿಸಿಡಬ್ಲ್ಯೂ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.

Edited By : Nagaraj Tulugeri
PublicNext

PublicNext

17/08/2022 08:39 pm

Cinque Terre

125 K

Cinque Terre

2

ಸಂಬಂಧಿತ ಸುದ್ದಿ