ಮುಂಬೈ: ಶಿಥಿಲಾವಸ್ಥೆಯಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೊಂದು ನೋಡ ನೋಡುತ್ತಿದ್ದಂತೆ ಕಟ್ಟಡವೊಂದು ಕುಸಿದು ಬಿದ್ದು ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ಇರುವ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳ ಅಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ, ಗಾಯಗಳಾಗಿರುವ ಬಗ್ಗೆ ವರದಿ ಆಗಿಲ್ಲ.
ಕಟ್ಟಡ ಕುಸಿತದ ವಿಷಯ ತಿಳಿಯುತ್ತಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ. ಶಿಥಿಲಗೊಂಡಿದ್ದ ಈ ಕಟ್ಟಡ ಬೀಳುವ ಹಂತದಲ್ಲಿದ್ದ ಹಿನ್ನೆಲೆಯಲ್ಲಿ ಜನರನ್ನು ಖಾಲಿ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
19/08/2022 03:01 pm