ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಕ್ಯಾತೆ ತೆಗೆದು ಇಬ್ಬರು ಯುವತಿಯರು ಹೊಡೆದಾಡಿಕೊಂಡಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನ ಕ್ಯಾಂಟೀನ್‌ನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಯುವತಿಯರ ನಡುವೆ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದೆ. ನಂತರ ಇಬ್ಬರೂ ಯುವತಿಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮತ್ತು ಅವಾಚ್ಯ ಶಬ್ದಗಳಿಂದ ಒಬ್ಬರಿಗೊಬ್ಬರು ಬೈದುಕೊಂಡಿದ್ದಾರೆ.
PublicNext
11/10/2022 05:18 pm