ಬೆಂಗಳೂರು: ಹಣದ ವಿಚಾರಕ್ಕೆ ಮೂವರು ಬಾಲಕರಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಪಂಚರ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಹಣದ ವಿಚಾರಕ್ಕೆ ಮೂವರು ಅಪ್ರಾಪ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಇಬ್ಬರು ಅಪ್ರಾಪ್ತರು ಮತ್ತೊಬ್ಬ ಬಾಲಕನ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಅಪ್ರಾಪ್ತ ಸಾವನ್ನಪ್ಪಿದ್ದಾನೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
26/12/2020 08:17 am