ನವದೆಹಲಿ: ನಕಲಿ ನಗ್ನ ಫೋಟೋ ಕಳುಹಿಸಿ 100 ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಯುವಕನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
26 ವರ್ಷದ ನೋಯ್ಡಾ ನಿವಾಸಿ ಸುಮಿತ್ ಜಾ ಬಂಧಿತ ಆರೋಪಿ. ಸುಮಿತ್ ಜಾ ಈ ಹಿಂದೆ ಛತ್ತೀಸಗಡದಲ್ಲಿ ಇದೇ ರೀತಿಯ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ. ಆರೋಪಿಯು ತನ್ನ ಕೃತ್ಯಗಳನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಸುಮಿತ್ ದೆಹಲಿ ಮಹಿಳೆಯೊಬ್ಬರ ಇನ್‌ಸ್ಟಾಗ್ರಾಮ್ ಖಾತೆ ಹ್ಯಾಕ್ ಮಾಡಿ ಬೆದರಿಕೆ ಹಾಕಿದ್ದ. ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಆತ ಸುಮಾರು 100 ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡಿರುವುದು ಬೆಳಕಿಗೆ ಬಂದಿದೆ.
PublicNext
30/12/2020 05:20 pm