ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ನ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮಂಗಳವಾರ ಸಂಜೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ವಿದ್ಯಾರ್ಥಿನಿಯ ರೂಮ್‌ಮೇಟ್ ತನ್ನ ಶಿಫ್ಟ್ ಮುಗಿಸಿ ಹಾಸ್ಟೆಲ್‌ನ ಕೋಣೆಗೆ ಮರಳಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ರಾಜ್‌ಕೋಟ್ ಪೊಲೀಸರು ಪರಿಶೀಲನೆ ನಡೆಸಿ, ವಿದ್ಯಾರ್ಥಿನಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀರು ತನಿಖೆ ಆರಂಭಿಸಿದ್ದಾರೆ.
PublicNext
31/12/2020 02:13 pm