ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್‌ಐ ಆತ್ಮಹತ್ಯೆಗೆ ಟ್ವಿಸ್ಟ್..!

ಲಕ್ನೋ: ಹೊಸ ವರ್ಷದ ಮೊದಲ ದಿನವೇ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದ ಸಬ್‌ ಇನ್‌ಸ್ಪೆಕ್ಟರ್ ಆರ್ಜೂ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ.

ಆರ್ಜೂ ಶುಕ್ರವಾರ ರಾತ್ರಿ ವಾಸವಾಗಿದ್ದ ಬಾಡಿಗೆ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಶನಿವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸಂಜೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಸದ್ಯ ಡೆತ್‌ನೋಟ್ ಸಿಕ್ಕಿದ್ದು ಅದರಲ್ಲಿ ''ನನ್ನ ಸಾವಿಗೆ ನಾನೇ ಕಾರಣ'' ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದೆ.

ಆರ್ಜೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೀಗಾಗಿ ಅವರು ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆದು ಮೊಬೈಲ್ ಲಾಕ್ ಆದ ಹಿನ್ನೆಲೆಯಲ್ಲಿ ಫೋರೆನಿಕ್ಸ್‌ ಲ್ಯಾಬ್‌ಗೆ ಕಳುಹಿಸಲಾಗಿದೆ. ಇದರಲ್ಲಿ ಆತ್ಮಹತ್ಯೆ ರಹಸ್ಯ ಅಡಗಿದೆ ಎನ್ನಲಾಗಿದೆ.

Edited By : Vijay Kumar
PublicNext

PublicNext

03/01/2021 05:06 pm

Cinque Terre

58.58 K

Cinque Terre

2

ಸಂಬಂಧಿತ ಸುದ್ದಿ