ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಆತನ ಸಹಚರರಿಗೆ 2ವರ್ಷ ಜೈಲು ಶಿಕ್ಷೆಯಾಗಿದೆ.
ಛೋಟಾ ರಾಜನ್ ನನ್ನು 2015ರಲ್ಲಿ ಭಾರತದ ಅಧಿಕಾರಿಗಳು ಇಂಡೋನೇಷ್ಯಾದಲ್ಲಿ ಅರೆಸ್ಟ್ ಮಾಡಿದ್ದರು. ಬಳಿಕ ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. 75 ಅಪರಾಧಗಳ ಪೈಕಿ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿ 20 ಕ್ಕೂ ಹೆಚ್ಚು ಪ್ರಕರಣಗಳು ರಾಜನ್ ವಿರುದ್ಧ ದಾಖಲಾಗಿವೆ.
ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛೋಟಾ ರಾಜನ್ ಮತ್ತು ಅವನ ಮೂವರು ಸಹಚರರಿಗೆ ಮುಂಬೈ ಸೆಷನ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
PublicNext
04/01/2021 06:14 pm