ಕಲಬುರಗಿ: ಮೊಬೈಲ್ ವಿಷಯವಾಗಿ ಹೆತ್ತವರ ಜೊತೆ ಜಗಳವಾಡಿಕೊಂಡು ಸಹೋದರರಿಬ್ಬರು ಸೊಂಟಕ್ಕೆ ಕಲ್ಲು ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.
ಸುನೀಲ್ (17) ಹಾಗೂ ಶೇಖರ್ (12) ಆತ್ಮಹತ್ಯೆಗೆ ಶರಣಾದ ಸಹೋದರರು. ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳವಾಡಿದ ಬಳಿಕ ಹೊಲಕ್ಕೆ ಬಂದು ಬಾವಿಗೆ ಹಾರಿದ್ದಾರೆ.
ಇಬ್ಬರಿಗೂ ಈಜು ಬರುವ ಹಿನ್ನೆಲೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
05/01/2021 01:11 pm