ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರೀತಿಸಿ ಮದ್ವೆಯಾದ ಪತ್ನಿಯನ್ನ 3ನೇ ಮಹಡಿಯಿಂದ ನೂಕಿ ಕೊಲೆ: ಅನಾಥವಾದ ಕಂದಮ್ಮ

ನೆಲಮಂಗಲ: ಪ್ರೀತಿಸಿ ಎರಡು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಪಾಪಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯನ್ನು ಮೂರನೇ ಮಹಡಿಯಿಂದ ನೂಕಿ ಕೊಲೆಗೈದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಸಿದ್ದನ ಹೊಸಹಳ್ಳಿಯಲ್ಲಿ ನಡೆದಿದೆ.

ಮೂಲತಃ ಚಿತ್ರದುರ್ಗ ಜಿಲ್ಲೆಯ ಅಕ್ಕ-ಪಕ್ಕದ ಗ್ರಾಮದ ಚೈತ್ರ (20) ಹಾಗೂ ಕಾಂತರಾಜ್ (24) ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಮುದ್ದಾದ ಗಂಡು ಮಗು ಸಹ ಇತ್ತು. ಬೆಂಗಳೂರು ಉತ್ತರ ತಾಲೂಕು ಮಾದನಾಯಕನಹಳ್ಳಿಯ ಸಿದ್ದನ ಹೊಸಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಇತ್ತೀಚೆಗೆ ವರದಕ್ಷಿಣೆ ಭೂತ ಮೈಗೇರಿಸಿಗೊಂಡಿದ್ದ ಪತಿ ಕಾಂತರಾಜ್ ಪತ್ನಿಯ ಜೊತೆ ಜಗಳವಾಡುತ್ತಿದ್ದ. ಮಂಗಳವಾರ ರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿಯನ್ನ ಮಹಡಿ ಮೇಲಿಂದ ತಳ್ಳಿ ಕೊಂದು ಬಿಟ್ಟಿದ್ದಾನೆ.

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದು, ಡಿವೈಎಸ್ಪಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ತನಿಖೆಗೆ ಆದೇಶಿಸಿದ್ದಾರೆ. ಪತಿ-ಪತ್ನಿಯ ಜಗಳದಲ್ಲಿ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಅನಾಥವಾಗಿದೆ.

Edited By : Vijay Kumar
PublicNext

PublicNext

06/01/2021 03:57 pm

Cinque Terre

75.44 K

Cinque Terre

3

ಸಂಬಂಧಿತ ಸುದ್ದಿ