ಲಾಹೋರ್: 26-11 ಮುಂಬೈ ಉಗ್ರ ದಾಳಿಯ ಸಂಚು ರೂಪಿಸಿದ್ದ ಜಾಕೀರ್ ಲಖ್ವಿಗೆ ಲಾಹೋರ್ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಭಯೋತ್ಪಾದನಾ ಕಾರ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಲಖ್ವಿಗೆ ಶಿಕ್ಷೆ ನೀಡಲಾಗಿದೆ.
ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಈ ಹಿಂದೆ ಬಂಧಿತನಾಗಿದ್ದ ಲಖ್ವಿ 2015ರಲ್ಲಿ ಜಾಮೀನು ಪಡೆದಿದ್ದ. ದೇಶದಲ್ಲಿ ಸ್ವಚ್ಛಂದವಾಗಿ ತಿರುಗಾಡುತ್ತಿರುವ ಉಗ್ರರನ್ನು ಬಂಧಿಸಬೇಕೆಂದು ಅಂತಾರಾಷ್ಟ್ರೀಯ ಒತ್ತಡಗಳು ಹೆಚ್ಚಾದ ಹಿನ್ನಲೆಯಲ್ಲಿ ಜ.2ರಂದು ಪಂಜಾಬ್ ಪ್ರಾಂತ್ಯದಲ್ಲಿ ಬಂಧಿಸಲಾಗಿತ್ತು.
2008ರ ನವೆಂಬರ್ 26ರಂದು ಮುಂಬೈನಲ್ಲಿ ನಡೆದ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದರು.
PublicNext
08/01/2021 04:47 pm