ಕುಶಾಲನಗರ: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಚಿಕ್ಕತ್ತೂರಿನ ನಿವಾಸಿಗಳಾದ ಶ್ರೀಧರ್(39) ಮತ್ತು ಅವರ ಪತ್ನಿ ಶೃತಿ (26) ಆತ್ಮಹತ್ಯೆಗೆ ಶರಣಾದವರು.
ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ಈ ದಂಪತಿ, ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ಸಾಂಸಾರಿಕ ಜೀವನದಲ್ಲಿ ಹೊಂದಾಣಿಕೆಯಿಲ್ಲದ ಕಾರಣ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಗಳಿವೆ ಎಂದು ನೆರೆ ಹೊರೆಯರು ಅಭಿಪ್ರಾಯ ತಿಳಿಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಗೋವಿಂದರಾಜು ಹಾಗೂ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.
PublicNext
10/01/2021 06:36 pm