ನವದೆಹಲಿ: ನೆರೆಮನೆಯ ವ್ಯಕ್ತಿಯೊಬ್ಬ ಮನೆಯೊಳಗೆ ನುಗ್ಗಿ ಪಿಸ್ತೂಲ್ ತೋರಿಸಿ 14ರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಗ್ರೇಟರ್ ನೋಯ್ಡಾದ ರಬುಪುರಾ ವಲಯದಲ್ಲಿ ನಡೆದಿದೆ.
ರೈತನ ಮಗಳಾಗಿರುವ ಬಾಲಕಿ ತನ್ನ ಸಹೋದರಿಯೊಂದಿಗೆ ರಾತ್ರಿ ಮಲಗಿದ್ದಳು. ಈ ವೇಳೆ ಮನೆಗೆ ನುಗ್ಗಿದ ಕಾಮುಕ ದೇಶೀ ನಿರ್ಮಿತ ಪಿಸ್ತೂಲ್ ತೋರಿಸಿ ಬಾಲಕಿ ಬೆರಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕಿರುಚಿದ್ದನ್ನು ಕೇಳಿಸಿಕೊಂಡ ಸಂತ್ರಸ್ತೆಯ ಮನೆಯವರು ನಿದ್ದೆಯಿಂದ ಎಚ್ಚರಗೊಂಡಿದ್ದಾರೆ. ತಕ್ಷಣವೇ ಆರೋಪಿಯನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ.
ಈ ಸಂಬಂಧ ಸಂತ್ರಸ್ತೆಯ ಸಂಬಂಧಿಕರು ಗ್ರೇಟರ್ ನೋಯ್ಡಾ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
PublicNext
11/01/2021 12:32 pm