ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಸಿ.ಕೆ ಅಚ್ಚುಕಟ್ಟು ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಶಬ್ಬೀರ್ ಅಹಮ್ಮದ್ ಬಂಧಿತ ಆರೋಪಿ. ಪ್ರಮುಖ ಆರೋಪಿ ಮೊಹಮ್ಮದ್ ರಿಜ್ವಾನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಾದ ಶಬ್ಬಿರ್ ಮತ್ತು ರಿಜ್ವಾನ್ ಸಹೋದರರು.
2018ರಲ್ಲಿ ರಿಜ್ವಾನ್ ಹಿಂದೂ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಈ ಪರಿಚಯ ಪ್ರೀತಿಕ್ಕೆ ತಿರುಗಿದ್ದು, 2020ರ ನವೆಂಬರ್ ತಿಂಗಳಲ್ಲಿ ಇಬ್ಬರೂ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ರಿಜ್ವಾನ್ ಹಣೆಯಲ್ಲಿರುವ ಕುಂಕುಮ ತೆಗೆದು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಪೀಡಿಸಲು ಆರಂಭಿಸಿದ್ದ. ಅಲ್ಲದೆ ದುಬೈನಲ್ಲಿ ನಿನಗೆ ಕೆಲಸ ಕೊಡಿಸುತ್ತೇನೆ. ಅಲ್ಲಿಯೇ ನಾವು ಸೆಟ್ಲ್ ಆಗೋಣ ಎಂದು ಕಿರುಕುಳ ನೀಡುತ್ತಿದ್ದ ಎನ್ನುವುದು ದೂರಿನಲ್ಲಿ ದಾಖಲಾಗಿದೆ.
ಈ ಇಬ್ಬರು ಆರೋಪಿಗಳ ವಿರುದ್ಧ ಯುವತಿ ಮೇಲೆ ಅತ್ಯಾಚಾರಗೈದ ಆರೋಪವಿದೆ. ಈ ಸಂಬಂಧ ಸಿ.ಕೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
PublicNext
11/01/2021 01:25 pm