ಭೋಪಾಲ್: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾದರೂ ಇಂತಹ ಹೇಯ ಕೃತ್ಯಗಳು ನಡೆಯುತ್ತಲೇ ಇವೆ. ಕೆಲ ದಿನಗಳ ಹಿಂದಷ್ಟೇ ಜಾರ್ಖಂಡ್ನಲ್ಲಿ 50 ವರ್ಷದ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಕಾಮುಕರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಮಧ್ಯ ಪ್ರದೇಶದಲ್ಲಿ ಇನ್ನೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಾಲ್ವರು ಕಾಮುಕರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗುಪ್ತಾಂಗದಲ್ಲಿ ಉಂಟಾದ ಗಾಯದಿಂದ ರಕ್ತಸ್ರಾವವಾಗುತ್ತಿದ್ದು, ಸಂತ್ರಸ್ತೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಪತಿ 4 ವರ್ಷಗಳ ಹಿಂದೆ ಮೃತಪಟ್ಟಿದ್ದರಿಂದ ಸಂತ್ರಸ್ತೆಯು ತನ್ನಿಬ್ಬರು ಚಿಕ್ಕ ಮಕ್ಕಳೊಂದಿಗೆ ಏಕಾಂಗಿಯಾಗಿ ವಾಸವಾಗಿದ್ದರು. ಶನಿವಾರ ರಾತ್ರಿ ಮಹಿಳೆಯ ಮನೆಗೆ ನಡುರಾತ್ರಿ ನೀರು ಕೇಳಿಕೊಂಡು ಬಂದಿದ್ದಳು. ಆದರೆ ರಾತ್ರಿಯಾಗಿದ್ದರಿಂದ ಬಾಗಿಲು ತೆರೆಯಲು ಮಹಿಳೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಆರೋಪಿ ತನ್ನ ಸ್ನೇಹಿತರನ್ನು ಕರೆಸಿ, ಆ ಮನೆಯ ಬಾಗಿಲು ಒಡೆದು ಒಳಗೆ ಹೋಗಿದ್ದ. ಬಳಿಕ ನಾಲ್ವರು ಸ್ನೇಹಿತರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ನಂತರ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ಹಾಕಿ ಹೊಡೆದು ಹಿಂಸೆ ನೀಡಿದ್ದಾರೆ.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಸಿಧಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವರದಿಯಾಗಿದೆ.
PublicNext
11/01/2021 04:51 pm