ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿ ಹಂಚಿಕೆ ವೇಳೆ ತನಗೆ ಸೂಕ್ತ ಪಾಲು ಸಿಗಲಿಲ್ಲ ಎಂಬ ಕಾರಣಕ್ಕೆ ಹಿರಿಯ ಅಣ್ಣ ತನಗೇ ತಾನೇ ಚಾಕುವಿನಿಂದ ತಿವಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಜಗನ್ನಾಥ (63) ಹಿರಿಯ ಅಣ್ಣ ಚಾಕುವಿನಿಂದ ಇರಿದುಕೊಂಡ ವ್ಯಕ್ತಿ.
ತಾಲೂಕಿನ ಗಂಗಸಂದ್ರ ಗ್ರಾಮದ ತೋಟದ ಮನೆಯಲ್ಲಿ ಲೇಟ್ ಸಿದ್ದಪ್ಪನವರ ಐದು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯ ಹಂಚಿಕೆ ವಿವಾದ ಸುಮಾರು ವರ್ಷಗಳಿಂದ ಸಾಕಷ್ಟು ತಕರಾರುಗಳಿಂದ ಕೂಡಿತ್ತು. ಈ ನಡುವೆ ಇಂದು ಅಣ್ಣ-ತಮ್ಮಂದಿರು ಸೇರಿ ಮಾತುಕತೆ ನಡೆಸಿ ಜಮೀನುಗಳ ವಿಭಾಗಗಳನ್ನು ರಿಜಿಸ್ಟರ್ ಮಾಡಿಸಲು ಗೌರಿಬಿದನೂರು ತಾಲೂಕು ಕಚೇರಿಗೆ ಹೋಗಿದ್ದಾರೆ. ಆದರೆ ತನಗೆ ನ್ಯಾಯ ಸಿಗಲಿಲ್ಲ ಎಂಬ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಹಿನ್ನಲೆಯಲ್ಲಿ ಹಿರಿಯಣ್ಣ ತನಗೆ ತಾನೇ ಚಾಕೂ ಇರಿದುಕೊಂಡಿದ್ದಾನೆ.
PublicNext
13/01/2021 01:44 pm