ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಹಾಡಹಗಲೇ ಸಹೋದರಿಬ್ಬರನ್ನ ಕೊಚ್ಚಿ ಕೊಲೆ- ಬೆಚ್ಚಿಬಿದ್ದ ಗ್ರಾಮಸ್ಥರು

ಕಲಬುರಗಿ: ಹಾಡಹಗಲೇ ಸಹೋದರರಿಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ‌.

ತಡಕಲ್ ಗ್ರಾಮದ ನಿಲೇಶ (34) ಹಾಗೂ ರಾಜಶೇಖರ (28) ಕೊಲೆಯಾದ ಸಹೋದರರು. ಗ್ರಾಮದ ಹೊರವಲಯದಲ್ಲಿ ಆರೇಳು ಜನರು ಸೇರಿಕೊಂಡು ಬೆಳಗ್ಗೆ 9 ಗಂಟೆ ಸುಮಾರಿಗೆ ನಿಲೇಶ ಸಹೋದರರನ್ನು ಅಟ್ಟಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ. ಆದರೆ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಕೃತ್ಯವು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಗ್ರಾಮದವರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಗ್ರಾಮೀಣ ವೃತ್ತ ಸಿಪಿಐ ಶಂಕರ ಗೌಡ ಪಾಟೀಲ್, ಮಹಾಗಾಂವ್ ಪಿಎಸ್ಐ ಪುಷ್ಪಾ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

15/01/2021 02:32 pm

Cinque Terre

53.5 K

Cinque Terre

1