ನೆಲಮಂಗಲ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಮಚ್ಚಿನ ಏಟು ಕೊಟ್ಟ ಘಟನೆ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ.
ಅಂಜನಾಮೂರ್ತಿ (35) ಹಲ್ಲೆಗೆ ಒಳಗಾದ ಆರೋಪಿ. ಸುಶೀಲಾ (27) ಹಲ್ಲೆ ನಡೆಸಿದ ಮಹಿಳೆ. ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಸುಶೀಲಾ ಅವರ ಮೇಲೆ ಅಂಜನಾಮೂರ್ತಿ ಕುಟುಂಬಸ್ಥರು ಹಲ್ಲೆ ನಡೆಸಿದ್ದು, ಕಾಲಿಗೆ ಮಚ್ಚಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಇದರಿಂದ ಸುಶೀಲಾ ಅವರ ಎರಡೂ ಕಾಲುಗಳಲ್ಲಿ ತೀವ್ರ ರಕ್ತಸ್ರಾವ ಉಂಟಾಗಿದೆ. ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಸುಶೀಲಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
18/01/2021 08:23 am