ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

CISF ಪೊಲೀಸರ ಭರ್ಜರಿ ಬೇಟೆ : ಸಿಕ್ಕಿಬಿದ್ದ ಕಸ್ಟಮ್ ಅಧಿಕಾರಿ

ಬೆಂಗಳೂರು: ಸಿಐಎಸ್ಎಫ್ ಪೊಲೀಸರು ಭರ್ಜರಿ ಬೇಟೆ ನಡೆಸಿ, ಕಸ್ಟಮ್ಸ್ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.

ಸಿಐಎಸ್ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಸ್ಟಮ್ಸ್ ಅಧಿಕಾರಿ ಇರ್ಫಾನ್ ಅಹಮದ್ ಮಹಮದ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯಿಂದ ಸೂಟ್ ಕೇಸ್, ಬ್ಯಾಗ್ ನಲ್ಲಿದ್ದ ಒಟ್ಟು 74,81,500 ರೂ.ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಲೆ ಬಾಳುವ ಮೊಬೈಲ್, ಆಪಲ್ ವಾಚ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸಿಐಎಸ್ಎಫ್ ಪೊಲೀಸರು ಬೆರಗಾಗಿದ್ದಾರೆ.

ಹಣವನ್ನು ವಶಪಡಿಸಿಕೊಳ್ಳುವುದನ್ನು ನೋಡುತ್ತಿದ್ದಂತೆ ಸಿಐಎಸ್ಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ಕಸ್ಟಮ್ಸ್ ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ ಕಂತೆ ಕಂತೆ ನೋಟುಗಳನ್ನು ಬಿಸಾಡಿದ್ದಾರೆ. ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ 10 ಲಕ್ಷ ರೂ. ಬಿಸಾಡಿರುವುದು ಪತ್ತೆಯಾಗಿದೆ.

ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಕಸ್ಟಮ್ಸ್ ಅಧಿಕಾರಿ ಚೆನ್ನೈ ನಲ್ಲಿ ವಾಸ ಮಾಡುತ್ತಿದ್ದಾರೆ. ಚೆನ್ನೈನಿಂದ ಲಕ್ನೋಗೆ ತೆರಳಲು ಬೆಂಗಳೂರಿಗೆ ಬಂದಿದ್ದರು. ತಪಾಸಣೆ ವೇಳೆ ಅಧಿಕಾರಿ ಸಿಕ್ಕಿಬಿದ್ದಿದ್ದಾನೆ.

Edited By : Nirmala Aralikatti
PublicNext

PublicNext

19/01/2021 11:25 pm

Cinque Terre

51.25 K

Cinque Terre

2

ಸಂಬಂಧಿತ ಸುದ್ದಿ