ಕ್ರೇಜಿ ಸ್ಟಾರ್ ರವಿಚಂದ್ರನ್ ಸದ್ಯ "ಕನ್ನಡಿಗ" ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಕನ್ನಡಿಗ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿರುವ ರವಿಚಂದ್ರನ್, ಸದ್ಯ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಕನ್ನಡಿಗ ಸಿನಿಮಾ ಮುಗಿಯುತ್ತಿದ್ದಂತೆ ರವಿಚಂದ್ರನ್ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಹೌದು ರವಿಚಂದ್ರನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ ಎನ್ನಲಾಗುತ್ತಿದೆ. ರವಿಚಂದ್ರನ್ ನಿರ್ದೇಶನದ ರಾಜೇಂದ್ರ ಪೊನ್ನಪ್ಪ ಸಿನಿಮಾ ಇನ್ನು ರಿಲೀಸ್ ಆಗಿಲ್ಲ. ಈ ನಡುವೆ ರವಿಚಂದ್ರನ್ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಕೇಳಿಬರುತ್ತಿದೆ.
ಮೂಲಗಳ ಪ್ರಕಾರ ರವಿಚಂದ್ರನ್ ರಾಜಕೀಯ ಕಥಾಹಂದರ ಹೊಂದಿರುವ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರಂತೆ. ಈ ಸಿನಿಮಾಗೆ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳುವ ಜೊತೆಗೆ ತೆರೆ ಮೇಲೆಯೂ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ.
PublicNext
20/01/2021 07:51 pm