ಮುಂಬೈ: ದೇಶದಲ್ಲಿ ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಇಂದು ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ದುರಂತದ ಬಗ್ಗೆ ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ.
ಸೆರಮ್ ಇನ್ಸ್ ಟ್ಯೂಟ್ ಘಟಕದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ ಎಂದು ಮೂಲಗಳು ಹೇಳಿದ್ದು. ಸೀರಂ ಇನ್ಸ್ ಟಿಟ್ಯೂಟ್ ಆವರಣದಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ಪ್ರಾಥಮಿಕ ಹಂತದಲ್ಲಿ ವರದಿಯಾಗಿತ್ತು.
ಅಗ್ನಿ ಅವಘಡದಿಂದ ಲಸಿಕೆ ತಯಾರಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಿಲ್ಲ. ಪ್ರಸ್ತುತ ಅಗ್ನಿ ಅವಘಡ ಸಂಭವಿಸಿರುವುದು ನಿರ್ಮಾಣ ಹಂತದ ಕಟ್ಟಡದಲ್ಲಿ. ಅಲ್ಲಿ ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಕೆಲಸ ನಡೆಯುತ್ತಿರಲಿಲ್ಲ. ಹೀಗಾಗಿ ಲಸಿಕೆ ತಯಾರಿಕೆಯ ಮೇಲೆ ಅಗ್ನಿ ಅವಘಡದಿಂದ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮೂಲಗಳು ತಿಳಿಸಿವೆ.
PublicNext
21/01/2021 06:54 pm