ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂಸೆಗೆ ತಿರುಗಿದ ಹೋರಾಟ : ಪುಂಡಾಟ ಮೆರೆದವರ ವಿರುದ್ಧ ಕಠಿಣ ಕ್ರಮಕ್ಕೆ ಶಾ ನಿರ್ದೇಶನ

ನವದೆಹಲಿ: ಗಣರಾಜ್ಯೋತ್ಸವ ದಿನ ದೇಶದಲ್ಲಿ ನಡೆಯಬಾರದ ಘಟನೆ ನಡೆದು ಹೋಗಿದೆ. ರೈತರ ಹೆಸರಿನಲ್ಲಿ ಪ್ರತಿಭಟನೆಗೆ ಬಂದ ಪುಂಡರು ರೈತರ ಟ್ರ್ಯಾಕ್ಟರ್ rally ವೇಳೆಯಲ್ಲಿ ಹಿಂಸಾಚಾರದಲ್ಲಿ ತೊಡಗಿದರು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ.

ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು, ಗುಪ್ತಚರ ಇಲಾಖೆ ಹಾಗೂ ದೆಹಲಿ ಪೊಲೀಸರೊಂದಿಗೆ ಎರಡು ಗಂಟೆ ಸಭೆ ನಡೆಸಿದ ಅಮಿತ್ ಶಾ, ಹಿಂಸಾಚಾರ ಸಂಭವಿಸಿದ ಬಳಿಕ ರಾಷ್ಟ್ರ ರಾಜಧಾನಿಯಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಾಮರ್ಶಿಸಿದರು.

ಗೃಹ ಸಚಿವರ ಮನೆಯಲ್ಲಿ ನಡೆದ ಸಭೆಯಲ್ಲಿ ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆಯನ್ನು ನಿಯೋಜಿಸುವಂತೆ ಶಾ ಆದೇಶಿಸಿದರು. ಹಿಂಸಾಚಾರ ಸಂಭವಿಸಿದ ಐಟಿಒ, ನಂಗ್ಲೋಯಿ, ಗಾಜಿಪುರ ಮತ್ತಿತರ ಕಡೆಗಳಲ್ಲಿ ಸುಮಾರು 15 ಹೆಚ್ಚುವರಿ ಅರೆಸೇನಾಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಐದು ಸಿಆರ್ ಪಿಎಫ್, 15 ಕೇಂದ್ರ ಶಸ್ತ್ರಸಜ್ಜಿತ ಪೊಲೀಸ್ ಪಡೆಯ ತುಕಡಿಗಳನ್ನು ಸೋಮವಾರದಿಂದಲೇ ನಿಯೋಜಿಸಲಾಗಿದೆ.

ಕಾನೂನು ಸುವ್ಯವಸ್ಥೆ ಶೀಘ್ರದಲ್ಲಿಯೇ ಸಹಜ ಸ್ಥಿತಿಗೆ ಬರಲಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ನಿಯಂತ್ರಣ ಹೇಗೆ ಕೈತಪ್ಪಿತು ಎಂಬುದರ ಬಗ್ಗೆ ಸಮಗ್ರ ಮಾಹಿತಿಯನ್ನು ಅಮಿತ್ ಶಾ ಕೇಳಿದ್ದಾರೆ.

Edited By : Nirmala Aralikatti
PublicNext

PublicNext

27/01/2021 10:16 am

Cinque Terre

88.41 K

Cinque Terre

5

ಸಂಬಂಧಿತ ಸುದ್ದಿ