ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಇನ್ಸ್ಪೆಕ್ಟರ್ ಮೇಲೆ ತಲವಾರ್ ದಾಳಿ: ಸಿಂಘು ಗಡಿ ಉದ್ವಿಗ್ನ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಸಿಂಘು ಗಡಿಯಲ್ಲಿ ಕಿಡಿಗೇಡಿಯೊಬ್ಬ ಇನ್ಸ್ಪೆಕ್ಟರ್ ಮೇಲೆ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾನೆ. ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ಈ ಹಲ್ಲೆ ನಡೆದಿದೆ.

ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸುವ ಉದ್ದೇಶದಿಂದ ಪೊಲೀಸರು ಇಂದು ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು‌. ರೈತರು ಇದಕ್ಕೆ ಪ್ರತಿದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಈ ವೇಳೆ ಅಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಿಡಿಗೇಡಿಯೊಬ್ಬ ತಲವಾರಿನಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಇನ್ಸ್ಪೆಕ್ಟರ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.‌ ತಲವಾರ್ ದಾಳಿ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳು ಪೊಲೀಸ್ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Edited By : Nagaraj Tulugeri
PublicNext

PublicNext

29/01/2021 03:18 pm

Cinque Terre

78.54 K

Cinque Terre

7

ಸಂಬಂಧಿತ ಸುದ್ದಿ