ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ- ಶಿಕ್ಷಕನ ಬಂಧನ

ಮಂಡ್ಯ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲೆಯ ಕೆ.ಆರ್​.ಪೇಟೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹರಿಹರಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಬಂಧಿತ ಆರೋಪಿ. ಈ ಸಂಬಂಧ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರಿಬ್ಬರು ಕಸಬಾ ಹೋಬಳಿಯ ಶಿಕ್ಷಕ ಸಂಯೋಜಕಿ ಜಿ.ನೀಲಮಣಿ ಮತ್ತು ಶೀಳನಕೆರೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗವೇಣಿ ಅವರಿಗೆ ದೂರು ನೀಡಿದ್ದರು. ಅವರು ಇದನ್ನು ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು ಅವರ ಗಮನಕ್ಕೆ ತಂದಿದ್ದರು. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಠಾಣೆಗೆ ಬಿಇಒ ದೂರು ನೀಡಿದ್ದರು. ಪೋಕ್ಸೋ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಬಂಧಿಸಿ, ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Vijay Kumar
PublicNext

PublicNext

31/01/2021 09:10 pm

Cinque Terre

70.01 K

Cinque Terre

5

ಸಂಬಂಧಿತ ಸುದ್ದಿ