ದಾವಣಗೆರೆ: ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಾಲಬಾಧೆ ತಾಳಲಲಾರದೇ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ಘಟನೆ ಹರಿಹರದಲ್ಲಿ ನಡೆದಿದೆ. ನಿಖಿತಾ ಲಾಡ್ಜ್ ನ ರೂಂ. 206ರಲ್ಲಿ ದಾವಣಗೆರೆಯ ನಿಟುವಳ್ಳಿ ನಿವಾಸಿ ಚಂದ್ರಶೇಖರ್ (45) ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ಮೃತ ವ್ಯಕ್ತಿ ಡೆತ್ ನೋಟ್ ಬರೆದಿಟ್ಟಿದ್ದಾರೆ ಖಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ಎರಡು ದಿನಗಳ ಹಿಂದೆ ಲಾಡ್ಜ್ ನಲ್ಲಿ ರೂಂ ಪಡೆದುಕೊಂಡಿದ್ದರು. ನಿನ್ನೆ ಮಧ್ಯಾಹ್ನ ಊಟದ ನಂತರ ರೂಂ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ರು.
ಪೊಲೀಸರ ರೂಂ ಬಾಗಿಲು ತೆಗೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ. ಹರಿಹರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
02/02/2021 05:46 pm