ಚಿಕ್ಕಮಗಳೂರು: 15 ವರ್ಷ ವಯಸ್ಸಿನ ಅಪ್ರಾಪ್ತೆ ಮೇಲೆ 17 ಕಾಮುಕರು ಐದು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಸೇರಿದಂತೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಕಾಮುಕರಿಗೆ ಸಹಕರಿಸಿದ ಬಾಲಕಿಯ ಚಿಕ್ಕಮ್ಮ ಸೇರಿದಂತೆ 17 ಆರೋಪಿಗಳ ಪೈಕಿ 8 ಮಂದಿಯನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
"ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಅವಳ ಚಿಕ್ಕಮ್ಮ ಸೇರಿದಂತೆ ಎಂಟು ಆರೋಪಿಗಳನ್ನು ನಾವು ಬಂಧಿಸಿದ್ದೇವೆ. ಬಾಲಕಿಯನ್ನು ಲೈಂಗಿಕವಾಗಿ ಶೋಷಿಸಿದ ಇತರ ಒಂಬತ್ತು ಮಂದಿಯ ಬಂಧನಕ್ಕಾಗಿ ಶೋಧ ನಡೆಯುತ್ತಿದೆ" ಎಂದು ಅಧಿಕಾರಿ ಹೇಳಿದ್ದಾರೆ.
ಆರೋಪಿಗಳನ್ನು ಸಣ್ಣ ಅಭಿ, ಅಶ್ವತ್‌ಗೌಡ, ಮಣಿಕಾಂತ, ಗಿರೀಶ್ ಆನೆಗುಂದ, ವಿಕಾಸ್, ಸಂಪತ್, ಅಮಿತ್, ರಾಜೇಶ್, ಸಂತೋಷ್, ದೀಕ್ಷಿತ್, ನಯನಗೌಡ, ಸಂತೋಷ್, ನಿರಂಜನ್, ಅಭಿಗೌಡ ಮತ್ತು ಯೋಗೀಶ್ ಎಂದು ಗುರುತಿಸಲಾಗಿದೆ.
PublicNext
02/02/2021 10:48 pm