ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ನಿರಂತರ ಹೋರಾಟ ನಡೆಸುತ್ತಿದ್ದು, ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರಾಕ್ಟರ್ rally ಹಿಂಸಾತ್ಮಕ ತಿರುವು ಪಡೆದುಕೊಂಡಿದ್ದನ್ನು ಯಾರು ಮರೆಯುವಂತಿಲ್ಲ.
ಅಂದು ಹೋರಾಟ ನಿರತರಲ್ಲಿ ಕೆಲ ವ್ಯಕ್ತಿಗಳು ಮಾಡಬಾರದ್ದನ್ನು ಮಾಡಿದ್ದಾರೆ ಕೆಂಪುಕೋಟೆಗೆ ನುಗ್ಗಿ ಸಿಖ್ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ದೀಪ್ ಸಿಧು ಸೇರಿದಂತೆ ಹಲವರ ಬಂಧನಕ್ಕೆ ದೆಹಲಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳ ದೀಪ್ ಸಿಧು, ಜುಗರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಅವರು ನಾಪತ್ತೆಯಾಗಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ್ದಾರೆ.
ಈ ಎಲ್ಲ ಆರೋಪಿಗಳು ಕೆಂಪುಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದ ಆರೋಪ ಎದುರಿಸುತ್ತಿದ್ದಾರೆ.ದೆಹಲಿಯಲ್ಲಿ ಹಿಂಸಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾಗಿರುವ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಬಂಧನಕ್ಕೂ ಪೊಲೀಸರು ಕ್ರಮ ಕೈಗೊಂಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ 50 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
PublicNext
03/02/2021 05:45 pm