ರಾಯ್‌ಪುರ: 16 ವರ್ಷದ ಬಾಲಕಿಯ ಮೇಲೆ 9 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಛತ್ತೀಸಗಡದ ಜಶ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
12ನೇ ತರಗತಿ ಓದುತ್ತಿದ್ದ ಬಾಲಕಿ ಮಂಗಳವಾರ ತನ್ನ ಸ್ನೇಹಿತನೊಂದಿಗೆ ಮನೆಗೆ ಮರಳುತ್ತಿದ್ದಳು. ಈ ವೇಳೆ ಒಂಬತ್ತು ಜನ ಕಾಮುಕರು ಪ್ರಜ್ಞೆ ತಪ್ಪುವವರೆಗೂ ಬಾಲಕನನ್ನು ಥಳಿಸಿದ್ದಾರೆ. ಬಳಿಕ ಬಾಲಕಿಯನ್ನು ಸಮೀಪದ ಕಾಡಿನೊಳಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
PublicNext
04/02/2021 08:37 am