ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಸಿಎಂ ಕೇಜ್ರಿವಾಲ್ ಪುತ್ರಿಗೆ ಆನ್ಲೈನ್ ವಂಚನೆ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆಂದು ವರದಿಯಾಗಿದೆ. ಮಾರಾಟ ಮತ್ತು ಖರೀದಿಗೆ ಆನ್‌ಲೈನ್ ವೇದಿಕೆಯಾದ ಒಎಲ್‌ಎಕ್ಸ್‌ನಲ್ಲಿ ಕೆಲವು ವಸ್ತುಗಳನ್ನು ಮಾರಾಟ ಮಾಡುವ ವೇಳೆ ವಂಚನೆಗೊಳಗಾಗಿದ್ದಾರೆ ಎನ್ನಲಾಗಿದೆ.

ಕ್ಯೂಆರ್​ ಕೋಡ್​ ಕಳಿಸಿದ ವ್ಯಕ್ತಿಯೊಬ್ಬ, ಕ್ಯೂ ಆರ್​ ಕೋಡ್​ ಸ್ಕ್ಯಾನ್​ ಮಾಡಿ, ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ ಎಂದು ಹೇಳಿದ್ದನಂತೆ. ಆತ ಹೇಳಿದಂತೆ ಹರ್ಷಿತಾ ಕ್ಯೂಆರ್​ ಕೋಡ್​ ಸ್ಕ್ಯಾನ್​ ಮಾಡಿದಾಗ, ಆಕೆಯ ಖಾತೆಯಿಂದ ಹಣ ಕಡಿತಗೊಂಡಿದೆ. ಈ ಕುರಿತು ದೆಹಲಿ ಪೊಲೀಸರ ಸೈಬರ್​ ಸೆಲ್​ ವಿಭಾಗಕ್ಕೆ ದೂರು ನೀಡಲಾಗಿದೆ. ಹಣದ ವಂಚನೆ ಪ್ರಕರಣ ಕುರಿತು ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Nagaraj Tulugeri
PublicNext

PublicNext

09/02/2021 10:04 am

Cinque Terre

78.01 K

Cinque Terre

2