ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಮತ್ತೋರ್ವನನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ವೆಂಕಟೇಶ್ ಬಂಧಿತ ಆರೋಪಿ. ವೆಂಕಟೇಶ್ ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿರುವ ಆರೋಪಿ ರಾಚಪ್ಪನ ತಮ್ಮ. ಇಬ್ಬರೂ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಮಾಹಿತಿ ನೀಡಿದ್ದಾರೆ.
ಕೆಪಿಎಸ್‌ಸಿ ಇಬ್ಬರು ನೌಕರರು ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಇನ್‌ಸ್ಪೆಕ್ಟರ್ ಸೇರಿದಂತೆ ಎಲ್ಲರೂ ಸಂಘಟಿತರಾಗಿ ಕೃತ್ಯ ಎಸಗಿದ್ದಾರೆ. ಆರೋಪಿಗಳು ಬಾಯ್ಬಿಟ್ಟ ಮಾಹಿತಿ ಹಾಗೂ ಪುರಾವೆ ಆಧರಿಸಿ ಮತ್ತಷ್ಟು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿ ವೆಂಕಟೇಶ್‌ನನ್ನು ಕಸ್ಟಡಿಗೆ ಪಡೆಯಲಾಗಿದೆ ಎಂದು ಸಂದೀಪ್ ಪಾಟೀಲ ತಿಳಿಸಿದ್ದಾರೆ.
PublicNext
11/02/2021 02:13 pm