ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡಿದ್ದು 11 ಜನರು ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿರುಧುನಗರ ಜಿಲ್ಲಾಧಿಕಾರಿ ಆರ್. ಕಣ್ಣನ್ ತಿಳಿಸಿದ್ದಾರೆ.
ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ. ಅಲ್ಲದೆ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ.
ವಿವಿಧೆಡೆಗಳಿಂದ ತರಿಸಲಾಗಿದ್ದ 10 ಅಗ್ನಿಶಾಮಕ ಯಂತ್ರಗಳು ಗಂಟೆಗಟ್ಟಲೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ. ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ.ಪರಿಹಾರವನ್ನು ಘೋಷಿಸಿದ್ದಾರೆ. ಕೇಂದ್ರವು ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ.ಮತ್ತು ಗಾಯಾಳುಗಳಿಗೆ 50,000 ರೂ.ಪರಿಹಾರವನ್ನು ಘೋಷಿಸಿದೆ.
PublicNext
12/02/2021 10:16 pm