ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐದು ದಿನ ಪೊಲೀಸ್ ವಶಕ್ಕೆ ದಿಶಾ ರವಿ

ನವದೆಹಲಿ: ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಈ ಹಿಂದೆ ಹಂಚಿಕೊಂಡಿದ್ದ ಟೂಲ್‌ಕಿಟ್‌ ಅನ್ನು ತಯಾರಿಸಿದ್ದೇ ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ನಿನ್ನೆ ಬಂಧಿತ ದಿಶಾ ರವಿಯನ್ನು ದೆಹಲಿಯ ಪಟಿಯಾಲ ಹೌಸ್​ ಕೋರ್ಟ್​ ಎದುರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ದಿಶಾ ರವಿಯನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ದೆಹಲಿ ಪೊಲೀಸರು, ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರು ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಗೂಗಲ್‌ ‘ಟೂಲ್‌ಕಿಟ್‌’ ಅನ್ನು ಗ್ರೇಟಾ ಥನ್‌ಬರ್ಗ್ ಜೊತೆ ಹಂಚಿಕೊಂಡಿದ್ದರು. ಅಲ್ಲದೆ ಈ ಟೂಲ್ ಕಿಟ್ ಅನ್ನು ತಯಾರಿಸಿದ್ದೇ ದಿಶಾ ರವಿ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

15/02/2021 08:56 am

Cinque Terre

123.05 K

Cinque Terre

8

ಸಂಬಂಧಿತ ಸುದ್ದಿ