ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವ್ಯಾಲೆಂಟೈನ್ ದಿನದಂದೇ ಬೆಳಗಾವಿಯಲ್ಲಿ ಪ್ರೇಮಿಗಳ ಸುಸೈಡ್

ಬೆಳಗಾವಿ: ಪ್ರೇಮಿಗಳ ದಿನದಂದೇ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯಗೆ ಶರಣಾಗಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ. ನಿನ್ನೆಯೇ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಂಚಿನಾಳ ಗ್ರಾಮದ ಆಸೀಫ್ ಜವಳಿ (21) ಮತ್ತು ಮಾಸಾಬಿ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಆಸೀಫ್ ಮತ್ತು ಮಾಸಾಬಿ ಒಂದೇ ಗ್ರಾಮದವರಾಗಿದ್ದರಿಂದ ಇಬ್ಬರ ನಡುವೆ ಪ್ರೇಮದ ಸೆಲೆ ಚಿಗುರೊಡೆದಿತ್ತು. ಆದ್ರೆ ಇಬ್ಬರ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಇತ್ತ ಮಾಸಾಬಿ ಮದುವೆಯನ್ನ ಬೇರೆ ಹುಡುಗನ ಜೊತೆ ನಿಶ್ಚಯ ಮಾಡಲಾಗಿತ್ತು. ಈ ಕಾರಣಕ್ಕೆ ಮನನೊಂದಿದ್ದ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ.

Edited By : Nagaraj Tulugeri
PublicNext

PublicNext

15/02/2021 10:45 am

Cinque Terre

90.12 K

Cinque Terre

4

ಸಂಬಂಧಿತ ಸುದ್ದಿ