ಮಂಡ್ಯ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಕಿಂಗ್ ಸ್ಟಾರ್ ಯಶ್ ತನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಯುವಕನೊಬ್ಬ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಡೆದಿದೆ.
ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಕೃಷ್ಣ(25) ಮೃತ ಯುವಕ. ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ, ಮೊನ್ನೆ ಕೆಲಸ ಮುಗಿಸಿಕೊಂಡು ಬಂದಿದ್ದ. ಬಳಿಕ ಬುಧವಾರ ರಜೆ ಹಾಕಿ ಮನೆಯಲ್ಲೇ ಇದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮನೆಯಲ್ಲಿ ಡೆತ್ನೋಟ್ ಸಿಕ್ಕಿದ್ದು, ಅದರಲ್ಲಿ ''ನನ್ನ ಅಂತ್ಯಕ್ರಿಯೆಯಲ್ಲಿ ಯಶ್ ಹಾಗೂಸಿದ್ದರಾಮಯ್ಯ ಪಾಲ್ಗೊಳ್ಳಬೇಕು. ನಾನು ನಿಮ್ಮ ಅಪ್ಪಟ ಅಭಿಮಾನಿ. ಕೈಮುಗಿದು ಕೇಳಿಕೊಳ್ಳುತ್ತೇನೆ. ನೀವು ನನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನನ್ನ ಕೊನೆಯ ಆಸೆ ಈಡೇರಿಸಿ'' ಎಂದು ಬರೆಯಲಾಗಿದೆ. ಹೀಗಾಗಿ ಅಭಿಮಾನಿಯ ಕೋರಿಕೆ ಈಡೇರಿಸಲು ಸಿದ್ದರಾಮಯ್ಯ ಅವರು ಇಂದು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
PublicNext
18/02/2021 10:25 am