ಹಾವೇರಿ: ಸಾರಿಗೆ ನಿಗಮದ ಚಾಲಕರೊಬ್ಬರು ಮನೆಯಲ್ಲಿ ಮಲಗಿದ್ದ ಜಾಗದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಚಿದಂಬರ್ ನಗರದ ಒಂದನೇ ಕ್ರಾಸ್‌ನಲ್ಲಿ ನಡೆದಿದೆ.
ಗದಗ ಜಿಲ್ಲೆ ರೋಣ ತಾಲ್ಲೂಕಿನ ಅರುಂಸಿ ಗ್ರಾಮದ ನಿವಾಸಿ ಸಂಗಮೇಶ ದೇಸಾಯಿ (40) ಮೃತ ಚಾಲಕ. ಸಂಗಮೇಶ ಕಳೆದ ನಾಲ್ಕು ವರ್ಷಗಳಿಂದ ಹಾನಗಲ್ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಗಮೇಶ ಅವರು 15 ದಿನಗಳ ಹಿಂದೆ ಮಕ್ಕಳೊಂದಿಗೆ ಬಾಗಲಕೋಟೆ ಜಿಲ್ಲೆಯ ಪತ್ನಿಯ ತವರು ಮನೆಗೆ ಹೋಗಿದ್ದರು.
ಈ ಘಟನೆ ಕುರಿತಂತೆ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
PublicNext
18/02/2021 03:33 pm