ಬೆಂಗಳೂರು: ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್ ನೀಡಿದ್ದಾರೆಂಬ ಆರೋಪದಲ್ಲಿ ಇದೀಗ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗಿದೆ.
2013, 2018 ಮತ್ತು ಉಪ ಚುನಾವಣೆಯ ಅಫಿಡವಿಟ್‍ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಕಡಿಮೆ ಆಸ್ತಿ ಘೋಷಣೆ ಮಾಡಿಕೊಂಡಿದ್ದು, ಇವರ ಪತ್ನಿ ಹೆಸರಲ್ಲಿ ಶೇ.5000ರಷ್ಟು ಆಸ್ತಿ ಹೆಚ್ಚಳವಾಗಿದೆ. ಆದರೂ ಆದಾಯದ ಮೂಲ ಯಾವುದು ಅಂತ ತೋರಿಸಿಲ್ಲ. ಲೋಕಾಯುಕ್ತಕ್ಕೆ ಸರಿಯಾದ ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ಐಟಿ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ್ದಾರೆ ಅಂತ ಆರೋಪಿಸಿ ಸಾಮಾಜಿ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ರು.
ಈ ಬಗ್ಗೆ ಪರಿಶೀಲನೆ ನಡೆಸಿದ ರಾಜ್ಯಪಾಲರು ಮುಂದಿನ ಕ್ರಮಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ. ಆದರೆ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿಲ್ಲ. ಮುಖ್ಯ ಕಾರ್ಯದರ್ಶಿಗಳಿಗೆ ಮುಂದಿನ ಕ್ರಮಕ್ಕಾಗಿ ವರ್ಗಾಯಿಸಿದ್ದಾರೆ ಅಂತ ಸಚಿವ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.
PublicNext
18/02/2021 10:17 pm