ಬೆಳಗಾವಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಡಗಾಂವಿ ನಿವಾಸಿ ಸುಹಾಸ ಸುರೇಶ್ ಪಿಳವಕರ, ಧಾಮನೆ ನಿವಾಸಿ ಮಹಾದೇವ ಲಕ್ಷ್ಮಣ ಪಾಟೀಲ್ ಹಾಗೂ ಬೆಳಗಾವಿಯ ವೀರಭದ್ರನಗರ ಬಂಧಿತ ಆರೋಪಿಗಳು. ಈ ಮೂವರು ನಗರದ ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೆರಿಗಲ್ಲಿಯಲ್ಲಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ನಗರದ ಖಡೇಬಜಾರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ದೀರಜ್ ಬಿ ಶಿಂಧೆ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ 2,950 ಕೆಜಿ ತೂಕದ 118 ಅಕ್ಕಿ ಚೀಲಗಳನ್ನು ಅವುಗಳ ವಶಕ್ಕೆ ಪಡೆದಿದ್ದಾರೆ. ಇದರ ಒಟ್ಟು 66,375 ರೂ. ಮೌಲ್ಯ ಇದೆ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
20/02/2021 02:25 pm