ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತ್ನಿಯೊಂದಿಗೆ ಅನೈತಿಕ ಸಂಬಂಧ- ಯುವಕನನ್ನು ಕೊಚ್ಚಿ ಹತ್ಯೆಗೆ ಯತ್ನಿಸಿದ ಪತಿ

ಚಿಕ್ಕಬಳ್ಳಾಪುರ: ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕೆ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಮೈಲಪ್ಪನಹಳ್ಳಿ ಗ್ರಾಮ ವೆಂಕಟೇಶ್(40) ಕೊಲೆ ಮಾಡಲು ಯತ್ನಿಸಿದ ವ್ಯಕ್ತಿ. ಅರ್ಜುನ್ (28) ಹಲ್ಲೆಗೆ ಒಳಗಾದ ಯುವಕ. ಅರ್ಜುನ್ ತನ್ನ ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ವೆಂಕಟೇಶ್ ಶಂಕಿಸಿದ್ದ. ಈ ಹಿನ್ನೆಲೆಯಲ್ಲಿ ರೇಜರ್ ಬ್ಲೇಡ್ ಹಾಗೂ ಚಾಕುವಿನಿಂದ ಅರ್ಜುನ್ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ.

ಈ ಘಟನೆಯಲ್ಲಿ ಅರ್ಜುನ್ ಕುತ್ತಿಗೆ ಸೀಳಿದ್ದು ತೀವ್ರ ರಕ್ತಸ್ರಾವದಿಂದ ಅಸ್ವಸ್ತಗೊಂಡಿದ್ದಾನೆ. ಆತನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಿಲಾಗಿದೆ. ಇತ್ತ ಆರೋಪಿ ವೆಂಕಟೇಶ್ ನಾಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ಬಲೆ ಬೀಸಿದ್ದಾರೆ.

Edited By : Vijay Kumar
PublicNext

PublicNext

20/02/2021 03:31 pm

Cinque Terre

54.73 K

Cinque Terre

0

ಸಂಬಂಧಿತ ಸುದ್ದಿ