ಬಾಗಲಕೋಟೆ: ಇಲ್ಲಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಫೈನಲ್ ಓದುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಸಿಂಧುರೇಖಾ ಸಿ.ಎಸ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಹೇಳಲಾಗುತ್ತಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಈಕೆ ನೇಣು ಬೀಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಿಂಧು ಕುಮಾರೇಶ್ವರ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ಎಂಬಿಬಿಎಸ್ ಓದುತ್ತಿದ್ದಳು. ಈಕೆ ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜ್ ಆವರಣದಲ್ಲಿರುವ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಪೋಷಕರು ಬೆಂಗಳೂರಿಗೆ ತೆರಳಿದ ನಂತರ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
PublicNext
21/02/2021 01:04 pm