ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿ ಅನ್ನದಾತರು ನಡೆಸುತ್ತಿರುವ ನಿರಂತರ ಹೋರಾಟ ಜ.26 ರಂದು ಹಿಂಸಾತ್ಮಕ ತಿರುವು ಪಡೆದುಕೊಂಡಿತ್ತು. ಅಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮದ ಮಧ್ಯೆ ಹಿಂಸಾಚಾರ ಸಂದರ್ಭದಲ್ಲಿ ಐತಿಹಾಸಿಕ ಕೆಂಪು ಕೋಟೆಯ ಗುಂಬಜ್ ಏರಿದ್ದ 24 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಸ್ಮಾರಕದಲ್ಲಿ ಪ್ರತಿಭಟನಾಕಾರರನ್ನು ಪ್ರಚೋದಿಸುವ ಉದ್ದೇಶದಿಂದ ಕತ್ತಿಗಳನ್ನು ತಿರುಗಿಸಿದ ಆರೋಪದ ಮೇಲೆ ಕಳೆದ ಮಂಗಳವಾರ ಬಂಧಿಸಲ್ಪಟ್ಟ ಮನಿಂದರ್ ಸಿಂಗ್ ಸಹಚರರಲ್ಲಿ ಒಬ್ಬರಾದ ಜಸ್ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ.
PublicNext
22/02/2021 08:07 pm