ಲಕ್ನೋ: ಗ್ರಾಹಕರನ್ನು ತಮ್ಮ ಅಂಗಡಿಗೆ ಆಕರ್ಷಿಸುವ ವಿಚಾರವಾಗಿ ವ್ಯಾಪಾರಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯಲ್ಲಿ ನಡೆದಿದೆ.
ಬಾಗ್‌ಪತ್‌ನ ಬರಾತ್ ಪಟ್ಟಣದ ಜನನಿಬಿಡ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ಗುಂಪುಗಳ ವ್ಯಾಪಾರಿಗಳು ಕೋಲುಗಳಿಂದ ಪರಸ್ಪರ ಹೊಡೆದಾಡಿಕೊಂಡ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದು.
ಅಂಗಡಿಗಳಿಗೆ ಗ್ರಾಹಕರನ್ನು ಆಕರ್ಷಿಸುವ ವಿಚಾರವಾಗಿ ವ್ಯಾಪಾರಿಗಳ ಎರಡು ಗುಂಪುಗಳ ಮಧ್ಯೆ ಮೊದಲು ವಾಗ್ದಾಳಿ ನಡೆದಿದೆ. ಆದರೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬರಾತ್ ಪಟ್ಟಣದ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ.
PublicNext
22/02/2021 09:35 pm