ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಬಳಿ ಅಕ್ರಮ ಕಲ್ಲು ಕ್ವಾರಿ ಸ್ಫೋಟ ದುರಂತದಲ್ಲಿ ಟಾಟಾ ಏಸ್ ವಾಹನ ಸಂಪೂರ್ಣ ಛಿದ್ರವಾಗಿದೆ. ಆದರೂ ಚಾಲಕ ರಿಯಾಜ್ ಪವಾಡ ಸದೃಶವಾಗಿ ಬದುಕುಳಿದಿದ್ದಾನೆ.
ಬ್ರಮರವಾಸಿನಿ ಕ್ರಷರ್ ಆಂಡ್ ಕ್ವಾರಿಗೆ ಸೇರಿದ ವಾಹನ ಇದಾಗಿದ್ದು, ಸ್ಥಳದಲ್ಲಿದ್ದ ಆರು ಮಂದಿ ದುರ್ಮರಣ ಕಂಡಿದ್ದಾರೆ. ಸ್ಫೋಟದ ತೀವ್ರತೆಗೆ ಟಾಟಾ ಏಸ್ ವಾಹನ, ಬೈಕ್ ಸಂಪೂರ್ಣ ಛಿದ್ರವಾಗಿದೆ. ಸದ್ಯ ಟಾಟಾ ಏಸ್ ವಾಹನ ರಿಯಾಜ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
‘ಬ್ರಮರವಾಸಿನಿ ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಅನುಮತಿ ನೀಡಿಲ್ಲ. ಆದರೆ ಅಕ್ರಮವಾಗಿ ಸ್ಫೋಟ ಮಾಡಿದ್ದಾರೆ. ಈ ಹಿಂದೆ ಕ್ವಾರಿ ಹಾಗೂ ಕ್ರಷರ್ ಮೇಲೆ ದಾಳಿ ಮಾಡಲಾಗಿತ್ತು. ದಾಳಿ ವೇಳೆ ಬಳಸಿದ್ದ ಕಂಪ್ರೇಸರ್ ಜಪ್ತಿ ಮಾಡಲಾಗಿತ್ತು. ಪೊಲೀಸರ ಕಣ್ಣು ತಪ್ಪಿಸಲು ಜಿಲೇಟಿನ್ ಕಡ್ಡಿಗಳನ್ನು ಬಚ್ಚಿಟ್ಟಿದ್ದರು. ಬಚ್ಚಿಟ್ಟಿದ್ದ ಕಡ್ಡಿಗಳನ್ನು ತೆಗೆದುಕೊಂಡು ಹೋಗಲು ಬಂದಾಗ ಘಟನೆ ನಡೆದಿದೆ'' ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮಾಹಿತಿ ನೀಡಿದ್ದಾರೆ.
PublicNext
23/02/2021 10:09 am