ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯನ್ನು ಕೊಚ್ಚಿ ಕೊಲೆ- ಬೆಚ್ಚಿಬಿದ್ದ ಜನ

ವಿಜಯಪುರ: ದೇವಸ್ಥಾನ ಆವರಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ನಡೆದಿದೆ.

ಹಡಗಿನಾಳ ಗ್ರಾಮದ ಮಲ್ಲು ನಾಯ್ಕೋಡಿ(30) ಕೊಲೆಯಾದ ವ್ಯಕ್ತಿ. ಮಲ್ಲು ನಿನ್ನೆ ರಾತ್ರಿ ಗ್ರಾಮದ ದೇವಸ್ಥಾನದ ಆವರಣದಲ್ಲಿ ಮಲಗಿದ್ದ. ಈ ವೇಳೆ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕೃತ್ಯಕ್ಕೆ ಹಳೇ ವೈಷಮ್ಯವೇ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

01/03/2021 09:11 am

Cinque Terre

86.94 K

Cinque Terre

0