ಬೆಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಟ್ಟಡದಿಂದ ಜಿಗಿದ ಪರಿಣಾಮ ಜಯಂತ್ ರೆಡ್ಡಿ ತೀವ್ರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಜಯಂತ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
01/03/2021 12:10 pm