ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖೋಟಾನೋಟು ಚಲಾವಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಬಂಧಿತರನ್ನು ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಎಂದು ಗುರುತಿಸಲಾಗಿದೆ.
ಚಾಮರಾಜನಗರದ ಕೊಳ್ಳೆಗಾಲದ ನಿವಾಸಿಗಳಾಗಿರುವ ಆರೋಪಿಗಳು ಸ್ವಿಫ್ಟ್ ಕಾರಿನಲ್ಲಿ ಸೆಲೆಬ್ರಿಟಿ ಲೇಔಟ್ ರಸ್ತೆಯಲ್ಲಿ ಖೋಟಾನೋಟು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 6.80 ಲಕ್ಷ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ.
PublicNext
01/03/2021 08:49 pm