ಶಿವಮೊಗ್ಗ: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್‌ವೊಂದು ಕೆರೆಗೆ ಉರುಳಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಸಾಗರದಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಗೆ ಉಳ್ಳೂರು ಕಾಸ್ಪಾಡಿ ಕ್ರಾಸ್ ಬಳಿ ಬೈಕ್ ಎದುರಾಗಿದೆ. ಈ ಸಂದರ್ಭದಲ್ಲಿ ಬಸ್ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಕೆರೆಗೆ ಉರುಳಿದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೈಕ್ ಸವಾರರಾದ ದೀಪಕ ಮತ್ತು ಪ್ರಜ್ವಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
30/07/2021 12:48 pm