ಉಡುಪಿ: ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ತಡರಾತ್ರಿ ಕೊಲೆಯೊಂದು ನಡೆದಿದೆ. ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ (33) ಎಂಬವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕು ವ್ಯಾಪ್ತಿಯ ಸಳ್ವಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಯಡಾಡಿ ಮತ್ಯಾಡಿ ಕೂಡಲ್ ನಿವಾಸಿಯಾಗಿದ್ದ ಅಜೇಂದ್ರ ಶೆಟ್ಟಿ ತಡರಾತ್ರಿಯವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ.
ಹುಡಾಕಾಟ ನಡೆಸುತ್ತಿದ್ದ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.ಇವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಫೈನಾನ್ಸ್ ನಡೆಸುತ್ತಿದ್ದರು.ಹಣಕಾಸಿನ ವಿಚಾರವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
PublicNext
31/07/2021 11:23 am