ಸೊರಬ: ಹೊಟ್ಟೆನೋವು ತಾಳಲಾರದೆ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು.
ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ಕುಣಿಕೆಗೆ ಕೊರಳೊಡ್ಡಿದ್ದಾಳೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
31/07/2021 09:12 pm