ಮೈಸೂರು: ಗುರು ಹಾಗೂ ಶಿಷ್ಯರ ನಡುವಿನ ಪವಿತ್ರ ಸಂಬಂಧಕ್ಕೆ ಕಳಂಕ ತರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಹೌದು. ತಿ.ನರಸೀಪುರದ ಪ್ರೊಫೆಸರ್ ಒಬ್ಬ ವಿದ್ಯಾರ್ಥಿಗಳನ್ನೇ ಪ್ರೀತಿಸುತ್ತಾನಂತೆ. ಅಷ್ಟೇ ಅಲ್ಲದೆ ಅಂಕ ಕಡಿತದ ಭಯ ಹುಟ್ಟಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾನಂತೆ ಎಂಬ ಆರೋಪಗಳು ಕೇಳಿ ಬಂದಿದೆ.
ತಿ.ನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುನೀಲ್ ಕುಮಾರ್ ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ಸಹಾಯಕ ಪ್ರಾಧ್ಯಾಪಕ. ಆರೋಪಿ ಸುನೀಲ್ ತರಗತಿಯಲ್ಲಿ ಪಾಠ ಮಾಡುವಾಗ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ಮಾತನಾಡುತ್ತಾನೆ, ಮುತ್ತು, ತಬ್ಬಿಕೊಳ್ಳುವ ಎಂದೆಲ್ಲ ಹೇಳುತ್ತಾನಂತೆ. ಈ ಬಗ್ಗೆ ಸ್ವತಃ ವಿದ್ಯಾರ್ಥಿನಿಯರೇ ಕಷ್ಟ ಹೇಳಿಕೊಂಡಿರುವ ಆಡಿಯೋ ವೈರಲ್ ಆಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ದಲಿತ ಮುಖಂಡ ಸೋಸಲೆ ಶಶಿಕಾಂತ್, "ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಸಹಾಯಕ ಪ್ರಾಧ್ಯಾಪಕ ಸುನೀಲ್ ಕುಮಾರ್ನಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ವಿದ್ಯಾರ್ಥಿಯರಿಗೆ ಪ್ರೀತಿ ಮಾಡುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದಾನೆ. ಈತನ ವಿರುದ್ಧ ಮೂರ್ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿಗಳೇ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮೂಗರ್ಜಿ ಬರೆದಿದ್ದರು. ನೊಂದ ವಿದ್ಯಾರ್ಥಿಗಳು ನಮ್ಮ ಬಳಿ ಕಷ್ಟ ಹೇಳಿಕೊಂಡಿದ್ದಾರೆ" ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರ ಭವಿಷ್ಯದ ದೃಷ್ಟಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ನೀಡಿಲ್ಲ. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ನಾವೇ ದೂರು ಕೊಟ್ಟಿದ್ದೇವೆ. ತಾಲೂಕು ಪಂಚಾಯಿತಿ ಎಸ್‌ಸಿ-ಎಸ್‌ಟಿ ಸಭೆಗಳಲ್ಲೂ ಸುನೀಲ್ ಕುಮಾರ್ ವರ್ತನೆ ಬಗ್ಗೆ ಪ್ರಸ್ತಾಪವಾಗಿದೆ. ಇಷ್ಟಾಗಿಯೂ ಆರೋಪಿಯ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
PublicNext
01/08/2021 05:40 pm